7 rupees

News @ your fingertips

ಏರ್ ಇಂಡಿಯಾ ಅಪಘಾತ ತನಿಖೆಯಲ್ಲಿ

ಜೂನ್‌ನಲ್ಲಿ ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಕಾರಣವಾದ ಎಲ್ಲಾ ಸಂಭಾವ್ಯ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಸ್ಪಷ್ಟಪಡಿಸಿದೆ.
ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 260 ಜನರು ಸಾವನ್ನಪ್ಪಿದರು. ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿದ್ದರು.
ಈ ಅಘಾತಕಾರಿ ಅಪಘಾತದ ತನಿಖೆ ನಡೆಸುತ್ತಿರುವ ವಿಮಾನ ಅಪಘಾತ ತನಿಖಾ ಬ್ಯೂರೋ ಜುಲೈ 12 ರಂದು ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು.
ಆ ಸಮಯದಲ್ಲಿ ಲಭ್ಯವಿದ್ದ ಪುರಾವೆಗಳ ಆಧಾರದ ಮೇಲೆ ಪ್ರಾಥಮಿಕ ವರದಿಯು ವಾಸ್ತವಿಕ ಮಾಹಿತಿಯನ್ನು ನೀಡಿದೆ. ಈಗ ಮತ್ತಷ್ಟು ತನಿಖೆ ಪ್ರಗತಿಯಲ್ಲಿದೆ. ಅಪಘಾತಕ್ಕೆ ಕಾರಣವಾದ ಎಲ್ಲಾ ಸಂಭಾವ್ಯ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಸೋಮವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ವಿಮಾನಗಳ ಸುರಕ್ಷಿತ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಮಗ್ರ ನಾಗರಿಕ ವಿಮಾನಯಾನ ನಿಯಮಗಳನ್ನು ರೂಪಿಸಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

 

 

.