7 rupees

News @ your fingertips

ಐಪಿಎಲ್ ಪಂಜಾಬ್ ಟಾಸ್ , ಆರ್‌ಸಿಬಿ ಬ್ಯಾಟಿಂಗ್

ಭಾರತೀಯ ಕ್ರಿಕೆಟ್‌ನ ವರ್ಣರಂಜಿತ ಐಪಿಎಲ್‌ನ ಫೈನಲ್ ಪಂದ್ಯ ಮಂಗಳವಾರ ರಾತ್ರಿ ಆರಂಭವಾಗಿದ್ದು , ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಗೊಂಡಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್‌ನ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಎರಡೂ ತಂಡಗಳು ಯಾವುದೇ ಬದಲಾವಣೆಗಳಿಲ್ಲದೆ ಆಡಲಿವೆ.
ಆರ್‌ಸಿಬಿ ಹಿಂದೆ 2009, 2011 ಮತ್ತು 2016 ರಲ್ಲಿ ಮೂರು ಬಾರಿ ಐಪಿಎಲ್ ಫೈನಲ್‌ಗೆ ಅರ್ಹತೆ ಪಡೆದಿದ್ದರೂ,ಅಂತಿಮ ಪಂದ್ಯಗಳಲ್ಲಿ ಸೋಲನ್ನು ಕಂಡಿತ್ತು. ಪಂಜಾಬ್ ಕಿಂಗ್ಸ್ 2014 ರಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿತ್ತು.
ಈ ಬಾರಿ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿದ ಆರ್‌ಸಿಬಿ ಐಪಿಎಲ್ 2025 ಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿತ್ತು.
ಕ್ವಾಲಿಫೈಯರ್ 2 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಎರಡನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶವನ್ನು ಪಡೆದುಕೊಂಡಿತ್ತು. ಲೀಗ್ ಹಂತದಲ್ಲಿ ಪಂಜಾಬ್ ಕಿಂಗ್ಸ್ ಅಗ್ರ ಸ್ಥಾನ ಪಡೆದರೆ , ಆರ್‌ಸಿಬಿ ಎರಡನೇ ಸ್ಥಾನದಲ್ಲಿತ್ತು.