News @ your fingertips
News @ your fingertips
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ 1,300 ಕೋಟಿ ರೂ. ಮೌಲ್ಯದ ಐಪಿಒಗೆ ಸಿದ್ಧತೆ ನಡೆಸಿದೆ.
ಜನವರಿ 9 ರಿಂದ 13 ಇಶ್ಯೂ ತೆರೆದಿರುತ್ತದೆ.
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಕೋಲ್ ಇಂಡಿಯಾ ಲಿಮಿಟೆಡ್ನ ಎಂಟು ಅಂಗಸಂಸ್ಥೆಗಳಲ್ಲಿ ಇದು ಒಂದಾಗಿದೆ. ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್, ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್, ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್, ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್, ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್, ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಮತ್ತು ಸೆಂಟ್ರಲ್ ಮೈನ್ ಪ್ಲಾನಿಂಗ್ ಡಿಸೈನ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ಉಳಿದ ಸಂಸ್ಥೆಗಳು.
ಸಂಸ್ಥೆಯ ಆಡಳಿತ ಮತ್ತು ಹೊಣೆಗಾರಿಕೆಯನ್ನು ಸುಧಾರಿಸಲು, 2030 ರ ವೇಳೆಗೆ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್ನ ಎಲ್ಲಾ ಅಂಗಸಂಸ್ಥೆಗಳನ್ನು ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್ ಮಾಡಲು ಕೇಂದ್ರ ಸರಕಾರ ಸೂಚಿಸಿತ್ತು. ಇದರಂತೆ ಇತ್ತೀಚಿಗೆ ನಡೆದ ಕೋಲ್ ಇಂಡಿಯಾ ಲಿಮಿಟೆಡ್ನ ನಿರ್ದೇಶಕರ ಮಂಡಳಿ ಈ ಅಂಗ ಸಂಸ್ಥೆಗಳನ್ನು ಲಿಸ್ಟ್ ಮಾಡಲು ಒಪ್ಪಿಗೆ ಸೂಚಿಸಿತ್ತು.ಅದರಂತೆ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ ಐಪಿಒ ಹೊರ ಬಂದಿದೆ.
2030 ರ ವೇಳೆಗೆ ಕೋಲ್ ಇಂಡಿಯಾದ ಎಲ್ಲಾ ಅಂಗಸಂಸ್ಥೆಗಳನ್ನು ಲಿಸ್ಟಿಂಗ್ ಮಾಡಲು ಸಂಸ್ಥೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
More Stories
ಕೋಲ್ ಇಂಡಿಯಾದ ಎರಡು ಸಹಸಂಸ್ಥೆಗಳು ಲಿಸ್ಟಿಂಗ್
ಅದಾನಿ ರೈಟ್ ಇಶ್ಯೂ ಭಾರೀ ಬೇಡಿಕೆ
ಫೆಡ್ ಬ್ಯಾಂಕ್ ನೀತಿ ಕುರಿತು ಕುತೂಹಲ