7 rupees

News @ your fingertips

ಲೋಕಸಮರಕ್ಕೆ ರೆಡಿ

ಲೋಕ ಸಮರಕ್ಕೆ ರಾಜ್ಯ ಸಿದ್ದವಾಗುತ್ತಿದ್ದು, ಎರಡನೇ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿವೆ.
ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿಂದಂತೆ ಹಲವರ ರಾಜಕೀಯ ಭವಿಷ್ಯ ಶುಕ್ರವಾರ ನಿರ್ಧಾರವಾಗಲಿದೆ.
ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಪೊಲೀಸ್ ಬಂದೋಬಸ್ ಮಾಡಲಾಗಿದೆ. ಚುನಾವಣಾಧಿಕಾರಿಗಳು ಹಾಗೂ ಮತಗಟ್ಟೆ ಸಿಬಂದಿಗಳು ಈಗಾಗಲೇ ಆಯಾ ಮತಗಟ್ಟೆಗಳಿಗೆ ತಲುಪಿದ್ದು , ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ.
ಹಲವು ಕಡೆಗಳಲ್ಲಿ ಮತಗಟ್ಟೆಗಳನ್ನು ಆಕರ್ಷಕವಾಗಿ ಶೃಂಗರಿಸಲಾಗಿದೆ. ಹಿರಿಯ ನಾಗರಿಕರು,ಅಶಕ್ತ ಮತದಾರರಿಗೆ ಮತ ಚಲಾವಣೆಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

 

× Subscribe us