7 rupees

News @ your fingertips

ಹರಿಯಾಣ ಚುನಾವಣೆ : ಮತಯಂತ್ರ ಬಗ್ಗೆ ಕಾಂಗ್ರೆಸ್ ದೂರು

ಹರಿಯಾಣ ವಿಧಾನ ಸಭಾ ಚುನಾವಣೆಗಳಲ್ಲಿ ಮತಯಂತ್ರಗಳಲ್ಲಿ ಲೋಪ ಉಂಟಾಗಿದೆ, ಅದನ್ನು ತನಿಖೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕರು ಬುಧವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಆಯುಕ್ತರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರು , 20 ದೂರುಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಸುಮಾರು 20 ವಿಧಾನ ಸಭಾ ಕ್ಷೇತ್ರಗಳಲ್ಲಿ ಮತಯಂತ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದಿರುವುದನ್ನು ದಾಖಲೆ ಸಮೇತ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಅವುಗಳ ಬಗ್ಗೆ ಸ್ಥಳೀಯ ಚುನಾವಣಾಧಿಕಾರಿಗಳಿಂದ ವರದಿ ತರಿಸಿ ಸಮರ್ಪಕವಾಗಿ ತನಿಖೆ ನಡೆಸುವುದಾಗಿ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.