News @ your fingertips
News @ your fingertips
ಲೈಂಗಿಕ ಹಗರಣದಲ್ಲಿ ಅಪಾದಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಹಾಲಿ ಜೆಡಿಎಸ್ ಸಂಸದರಾಗಿದ್ದಾರೆ. ಈ ಬಾರಿಯೂ ಅವರು ಜೆಡಿಎಸ್ನಿಂದ ಲೋಕಸಭೆಗೆ ಸ್ಪರ್ಧಿಸಿದ್ದಾರೆ. ಎಪ್ರಿಲ್ 26ರಂದು ಚುನಾವಣೆ ನಡೆದಿದ್ದು , ಅದಕ್ಕೂ 3 ದಿನ ಮುನ್ನ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿತ್ತು. ಈ ವಿಡಿಯೋ ಸಂಬಂಧ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಪ್ರಕರಣವನ್ನು ತನಿಖೆ ನಡೆಸುವಂತೆ ಹಲವು ಸಂಘಟನೆಗಳು ಒತ್ತಾಯಿಸಿದ್ದವು. ಇದಾದ ಬಳಿಕ ರಾಜ್ಯ ಸರಕಾರ ಭಾನುವಾರ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡವೊಂದನ್ನು ರಚಿಸಿತು. ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ , ಈ ಪ್ರಕರಣದಲ್ಲಿ ಪಕ್ಷ ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಪ್ರಜ್ವಲ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಈಗಾಗಲೇ ಉಚ್ಚಾಟಿಸಿದ್ದಾರೆ ಎಂದು ತಿಳಿಸಿದ್ದಾರೆ.
More Stories
ವಿಮಾನ ನಿಲ್ದಾಣ ಲೋಪಗಳ ಮೇಲೆ ಕಣ್ಗಾವಲು
ಬಿರ್ಲಾ ಫ್ಯಾಷನ್ನಿಂದ ಫ್ಲಿಫ್ ಕಾರ್ಟ್ ಹೊರಗೆ
ಪಾಕ್ನಲ್ಲಿ ಭೂಕಂಪ ಕೈದಿಗಳ ಪರಾರಿ