7 rupees

News @ your fingertips

ಅಭಿವೃದ್ದಿಗಾಗಿ ಕೇಂದ್ರದ 100 ದಿನಗಳ ಮಿಷನ್

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಹಾದಿಯನ್ನು ಸುಗಮಗೊಳಿಸುವ ಹಾಗೂ ತ್ವರಿತಗೊಳಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ 100 ದಿನಗಳ ಮಿಷನ್ ಆರಂಭಿಸುತ್ತಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಪ್ರಕಟಿಸಿದ್ದಾರೆ.
ಲಂಡನ್‌ನಲ್ಲಿ ನಡೆದ ಲೋಕಮತ್ ಎರಡನೇ ಜಾಗತಿಕ ಆರ್ಥಿಕ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವುದನ್ನು ತಡೆಯಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ದೇಶದ ಅಭಿವೃದ್ಧಿ ಪ್ರಯಾಣವನ್ನು ವೇಗಗೊಳಿಸಲು ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ದೃಷ್ಟಿಕೋನವನ್ನು ಕಾರ್ಯಗತಗೊಳಿಸಲು ಆಸ್ಟ್ 15 ರಂದು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಸರ್ಕಾರ ಅನುಸರಿಸುತ್ತದೆ ಎಂದು ಅವರು ಹೇಳಿದರು.
ಶುಕ್ರವಾರ, ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ವಿಷಯವನ್ನು ಕೇಂದ್ರೀಕರಿಸಿದ್ದರು. ಮೇಡ್-ಇನ್-ಇಂಡಿಯಾ ಶಸ್ತ್ರಾಸ್ತ್ರಗಳು ಸೇರಿದಂತೆ ಸ್ಥಳೀಯ ಸಾಮರ್ಥ್ಯಗಳು ದೇಶವು ನಿರ್ಣಾಯಕವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ ಎನ್ನುವುದನ್ನು ಅವರು ಒತ್ತಿ ಹೇಳಿದ್ದರು. ರಾಷ್ಟ್ರೀಯ ಭದ್ರತೆಯು ವಿದೇಶಿ ಅವಲಂಬನೆಯನ್ನು ಹೊಂದಿರಲು ಸಾಧ್ಯವಿಲ್ಲ ಎನ್ನುವುದನ್ನು ವಿವರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಗೋಯಲ್ , ಸರಕಾರ ತನ್ನ ಮಿಷನ್ ಸಾಕಾರಗೊಳಿಸಲು ಎಲ್ಲ ಸಕಾಲಿಕ ಕ್ರಮಗಳನ್ನು ಜರಗಿಸಲಿದೆ ಎಂದು ವಿವರಿಸಿದರು.
.