ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸದುಜ್ಜಮಾನ್ ಖಾನ್ ಕಮಲ್ ಅವರಿಗೆ ಮರಣದಂಡನೆ ವಿಧಿಸಿದೆ.
ತೀರ್ಪು ಬಂದ ಕೆಲವೇ ಗಂಟೆಗಳ ನಂತರ, ಬಾಂಗ್ಲಾದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದ ದೇಶದ ಮಧ್ಯಂತರ ಸರ್ಕಾರವು ನವದೆಹಲಿ ಮತ್ತು ಢಾಕಾ ನಡುವಿನ ಹಸ್ತಾಂತರ ಒಪ್ಪಂದದ ಭಾಗವಾಗಿ ಪದಚ್ಯುತ ನಾಯಕರನ್ನು ತನಗೆ ಹಸ್ತಾಂತರಿಸುವಂತೆ ಭಾರತವನ್ನು ಕೇಳಿಕೊಂಡಿದೆ.
ಬಾಂಗ್ಲಾದೇಶದ ನ್ಯಾಯಾಲಯವು ಸೋಮವಾರ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸದುಜ್ಜಮಾನ್ ಖಾನ್ ಕಮಲ್ ಅವರನ್ನು 2024ರ ಜುಲೈ -ಆಗಸ್ಟ್ನಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದ್ದು, ಅದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದೆ.
ವಿಶೇಷ ನ್ಯಾಯಮಂಡಳಿಯು ಹಸೀನಾ ಅವರ ಗೈರುಹಾಜರಿಯಲ್ಲಿ ವಿಚಾರಣೆ ನಡೆಸಿದೆ. ಹಸೀನಾ ಅವರ ಗೈರು ಹಾಜರಿಯಿಂದಾಗಿ ಅವರ ಪರ ವಕೀಲ ಮೊಹಮ್ಮದ್ ಅಮೀರ್ ಹುಸೇನ್ ಅವರಿಗೆ ಮೇಲ್ಮನವಿ ಸಲ್ಲಿಸಲು ಸಹ ಸಾಧ್ಯವಾಗಿಲ್ಲ.
ಮಾಜಿ ಪ್ರಧಾನಿ ಮತ್ತು ಗೃಹ ಸಚಿವರ ವಿರುದ್ಧ ನ್ಯಾಯಮಂಡಳಿಯ ಮುಂದೆ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಐಜಿಪಿ) ಚೌಧರಿ ಅಬ್ದುಲ್ಲಾ ಅಲ್ ಮಾಮುನ್ ಸಾಕ್ಷಿ ಹೇಳಿದ್ದು ,ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಇದಕ್ಕೂ ಮೊದಲು, ಈ ಪ್ರಕರಣದಲ್ಲಿ ಶೇಖ್ ಹಸೀನಾಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸರಕಾರ ಪ್ರಾಸಿಕ್ಯೂಟರ್ ತಾಜುಲ್ ಇಸ್ಲಾಂ ಮನವಿ ಮಾಡಿದ್ದರು.
ಬಾಂಗ್ಲಾ ದೇಶದ ನ್ಯಾಯ ಮಂಡಳಿ ತೀರ್ಪಿಗೆ ಭಾರತ ಪ್ರತಿಕ್ರಿಯಿಸಿದ್ದು , ನಿಕಟ ನೆರೆಯ ರಾಷ್ಟ್ರವಾಗಿ, ಆ ದೇಶದಲ್ಲಿ ಶಾಂತಿ, ಪ್ರಜಾಪ್ರಭುತ್ವ, ಸೇರ್ಪಡೆ ಮತ್ತು ಸ್ಥಿರತೆ ಸೇರಿದಂತೆ ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಭಾರತ ಬದ್ಧವಾಗಿದೆ. ನಾವು ಯಾವಾಗಲೂ ಎಲ್ಲಾ ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದೆ.
News @ your fingertips
More Stories
ಫೆ.1 ಬಜೆಟ್ , ಷೇರು ಮಾರುಕಟ್ಟೆ ಕೂಡಾ ಓಪನ್
ಜಿಗಿತ ಕಂಡ ಎಂಆರ್ಪಿಎಲ್ ಲಾಭ, ಷೇರು ಬೆಲೆ ಕೂಡಾ ಜಂಪ್
ಮಾದರಿಯಾದ ಬಾಸ್ ಏನು ಅನ್ನುತ್ತಿರಾ ?