News @ your fingertips
News @ your fingertips
ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ತಿಂಗಳಲ್ಲಿ ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ವರದಿಯೊಂದು ತಿಳಿಸಿದೆ.
ನರೇಂದ್ರ ಮೋದಿ ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ವರದಿ ವಿವರಿಸಿದೆ.
ಅದರೆ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಸಭೆ, ಮಾತುಕತೆ ಇನ್ನೂ ಅಧಿಕೃತವಾಗಿಲ್ಲ.
ಟ್ರಂಪ್ ಮೊನ್ನೆಯಷ್ಟೇ ಭಾರತದ ಮೇಲೆ ವಿಧಿಸಿರುವ ಶೇ.50ರಷ್ಟು ತೆರಿಗೆ , ಇನ್ನಿತರ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಭೇಟಿಯಾಗುವ , ಚರ್ಚಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ ಎಂದು ಇಂಡಿಯನ್ ಎಕ್ಸ್ಪ್ರೆಸ್ಸ್ ವರದಿಯಲ್ಲಿ ತಿಳಿಸಿದೆ.
ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಕೊನೆಯದಾಗಿ ಭೇಟಿಯಾದದ್ದು 2025 ರ ಫೆಬ್ರವರಿಯಲ್ಲಿ. ಭಾರತದ ಪ್ರಧಾನಿ ಅಮೆರಿಕಕ್ಕೆ ಭೇಟಿ ನೀಡಿದಾಗ.
ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿದ್ದು, ಆಗಸ್ಟ್ ಅಂತ್ಯದ ವೇಳೆಗೆ ವಿವಿರಗಳು ಅಂತಿಮಗೊಳ್ಳಬಹುದು.
More Stories
ಫೆ.1 ಬಜೆಟ್ , ಷೇರು ಮಾರುಕಟ್ಟೆ ಕೂಡಾ ಓಪನ್
ಜಿಗಿತ ಕಂಡ ಎಂಆರ್ಪಿಎಲ್ ಲಾಭ, ಷೇರು ಬೆಲೆ ಕೂಡಾ ಜಂಪ್
ಮಾದರಿಯಾದ ಬಾಸ್ ಏನು ಅನ್ನುತ್ತಿರಾ ?