News @ your fingertips
News @ your fingertips
ಕೇಂದ್ರ ಸರಕಾರ ರಾಜಸ್ಥಾನದ ಕೋಟಾದಲ್ಲಿ ಹೊಸ ವಿಮಾನ ನಿಲ್ದಾಣ ಮತ್ತು ಒಡಿಶಾದಲ್ಲಿ ಆರು ಪಥಗಳ ರಸ್ತೆ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ ನೀಡಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಹಲವಾರು ಮಹತ್ವದ ಯೋಜನೆಗಳಿಗೆ ಒಪ್ಪಿಗೆ ಸೂಚಿಸಿದೆ.
ರಾಜಸ್ಥಾನದ ಕೋಟಾ-ಬುಂಡಿಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಸ್ತಾವನೆಯನ್ನು ಸಮಿತಿ ಒಪ್ಪಿಗೆ ಸೂಚಿಸಿದೆ. ಇದು ರಾಜ್ಯದ ಕೈಗಾರಿಕಾ ಅಭಿವೃದ್ದಿಗೆ ಬಹು ದೊಡ್ಡ ಕೊಡುಗೆ ನೀಡುವ ನಿರೀಕ್ಷೆ ಇದೆ.ಅಲ್ಲದೆ , ಪ್ರತಿ ವರ್ಷ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸಕ್ಕಾಗಿ ಬರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ನೆರವಾಗಲಿದೆ. ಜೊತೆಯಲ್ಲಿ ಮತ್ತಷ್ಟು ಅಕಾಂಕ್ಷಿಗಳ ಬರುವಿಕೆಗೆ ಅನುಕೂಲ ಮಾಡಿಕೊಡಲಿದೆ.
ಕೋಟಾ-ಬುಂಡಿ ವಿಮಾನ ನಿಲ್ದಾಣವನ್ನು 1,507 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ವಿಮಾನ ನಿಲ್ದಾಣ ಪ್ರಾಧಿಕಾರ ಆಂತರಿಕ ಸಂಚಯದ ಮೂಲಕ ಹಣಕಾಸು ನೆರವು ಒದಗಿಸಲಿದೆ.
ರಾಜಸ್ಥಾನ ಸರ್ಕಾರವು ಈಗಾಗಲೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ 440.06 ಹೆಕ್ಟೇರ್ ಭೂಮಿಯನ್ನು ಪ್ರಾಧಿಕಾರಕ್ಕೆ ವರ್ಗಾಯಿಸಿದೆ.
ಈ ಯೋಜನೆಯು 20,000 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್ ಕಟ್ಟಡವನ್ನು ಒಳಗೊಂಡಿದೆ. ನೂತನ ವಿಮಾನ ನಿಲ್ದಾಣ ವಾರ್ಷಿಕ 2 ಮಿಲಿಯನ್ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯವನ್ನು ಹೊಂದಲಿದೆ.
More Stories
ಭಾರತ್ ಕೋಕಿಂಗ್ ಕೋಲ್ ಐಪಿಒ
ಕೋಲ್ ಇಂಡಿಯಾದ ಎರಡು ಸಹಸಂಸ್ಥೆಗಳು ಲಿಸ್ಟಿಂಗ್
ಅದಾನಿ ರೈಟ್ ಇಶ್ಯೂ ಭಾರೀ ಬೇಡಿಕೆ