7 rupees

News @ your fingertips

ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಉಚ್ಛಾಟನೆ

ಲೈಂಗಿಕ ಹಗರಣದಲ್ಲಿ ಅಪಾದಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಹಾಲಿ ಜೆಡಿಎಸ್ ಸಂಸದರಾಗಿದ್ದಾರೆ. ಈ ಬಾರಿಯೂ ಅವರು ಜೆಡಿಎಸ್‌ನಿಂದ ಲೋಕಸಭೆಗೆ ಸ್ಪರ್ಧಿಸಿದ್ದಾರೆ. ಎಪ್ರಿಲ್ 26ರಂದು ಚುನಾವಣೆ ನಡೆದಿದ್ದು , ಅದಕ್ಕೂ 3 ದಿನ ಮುನ್ನ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿತ್ತು. ಈ ವಿಡಿಯೋ ಸಂಬಂಧ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಪ್ರಕರಣವನ್ನು ತನಿಖೆ ನಡೆಸುವಂತೆ ಹಲವು ಸಂಘಟನೆಗಳು ಒತ್ತಾಯಿಸಿದ್ದವು. ಇದಾದ ಬಳಿಕ ರಾಜ್ಯ ಸರಕಾರ ಭಾನುವಾರ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡವೊಂದನ್ನು ರಚಿಸಿತು. ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ , ಈ ಪ್ರಕರಣದಲ್ಲಿ ಪಕ್ಷ ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಪ್ರಜ್ವಲ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಈಗಾಗಲೇ ಉಚ್ಚಾಟಿಸಿದ್ದಾರೆ ಎಂದು ತಿಳಿಸಿದ್ದಾರೆ.